

Jr NTR injured : ಟಾಲಿವುಡ್ ಸ್ಟಾರ್ ಹೀರೋ ಮತ್ತು ಜನಮನ ಗೆದ್ದ ಜೂನಿಯರ್ ಎನ್ ಟಿಆರ್ ಜಾಹೀರಾತು ಚಿತ್ರೀಕರಣದ ವೇಳೆ ಗಾಯಗೊಂಡರು. ವೈದ್ಯರು ಚಿಕಿತ್ಸೆ ನೀಡಿದ್ದು 2 ವಾರ ವಿಶ್ರಾಂತಿ ಹೇಳಿದ್ದಾರೆ ಎಂದು ಸುದ್ದಿ ಮೂಲಗಳಿಂದ ತಿಳಿದು ಬಂದಿದೆ.
ಹೈದರಾಬಾದ್ ನಲ್ಲಿ ಖಾಸಗಿ ಜಾಹೀರಾತಿನ ಚಿತ್ರೀಕರಣದ ವೇಳೆ ಅಪಘಾತಕ್ಕೀಡಾದರು. ವೈದ್ಯಕೀಯ ತಂಡ ತಕ್ಷಣ ಅವರಿಗೆ ಮೂಲಭೂತ ಚಿಕಿತ್ಸೆ ನೀಡಿತು. ಎನ್ ಟಿಆರ್ ಅವರ ಆರೋಗ್ಯ ಚೆನ್ನಾಗಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಪ್ರಸ್ತುತ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಂಡ ತಿಳಿಸಿದೆ.
"ಜಾಹೀರಾತು ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾಗ ಜೂನಿಯರ್ ಎನ್‌ಟಿಆರ್ ಅವರಿಗೆ ಸಣ್ಣಪುಟ್ಟ ಗಾಯವಾಯಿತು. ವೈದ್ಯರ ಸಲಹೆಯಂತೆ, ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಮುಂದಿನ ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಎನ್‌ಟಿಆರ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅಭಿಮಾನಿಗಳು ಚಿಂತಿಸಬೇಕಾಗಿಲ್ಲ. ಅಭಿಮಾನಿಗಳು, ಮಾಧ್ಯಮಗಳು ಮತ್ತು ಸಾರ್ವಜನಿಕರು ಯಾವುದೇ ಊಹಾಪೋಹಗಳನ್ನು ಹರಡುವುದನ್ನು ತಡೆಯಬೇಕೆಂದು ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ" ಎಂದು ಎನ್‌ಟಿಆರ್ ತಂಡ ಹೇಳಿಕೆ ಬಿಡುಗಡೆ ಮಾಡಿದೆ.
ವಿಷಯ ತಿಳಿದ ತಕ್ಷಣ ಅನೇಕ ಸೆಲೆಬ್ರಿಟಿಗಳು ಎನ್ ಟಿಆರ್ ಗೆ ಕರೆ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ ಎಂದು ವರದಿಯಾಗಿದೆ.