ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

prajwal
Published on

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್, ಜುಲೈ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು. ಈ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂ.26ರಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿತ್ತು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಈಗಾಗಲೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net