40% ಕಮಿಷನ್ ಹಗರಣ ಆರೋಪ ಪ್ರಕರಣ; ನ್ಯಾಯಾಂಗ ತನಿಖೆಗೆ ವಹಿಸಿದ ಸರ್ಕಾರ

Judicial Investigation
Published on

ಬೆಂಗಳೂರು: ಅಧಿಕಾರಕ್ಕೆ ಬರುತ್ತಿದ್ದಂತೆ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಆಡಳಿತದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡುವುದಾಗಿ ಹೇಳಿರುವ ಸರ್ಕಾರ, ಇದೀಗ ಆ ನಿಟ್ಟಿನಲ್ಲಿ ಮಹತ್ವದ ನಿರ್ಣಯವೊಂದನ್ನು ತಳೆದಿದೆ.

ಬಿಜೆಪಿ ಸರ್ಕಾರದಲ್ಲಿ ಭಾರಿ ಸದ್ದು ಮಾಡಿದ್ದ 40% ಕಮಿಷನ್ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಳೆದಿದ್ದು, ಆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ನಿವೃತ್ತ ನ್ಯಾಯಾಧೀಶ ವೀರಪ್ಪ ಅವರ ನೇತೃತ್ವದಲ್ಲಿ ಈ ನ್ಯಾಯಾಂಗ ತನಿಖೆ ನಡೆಯಲಿದೆ.

ಬಹುಕೋಟಿ ರೂಪಾಯಿ ಬಿಟ್ ಕಾಯಿನ್ ಪ್ರಕರಣವೂ ಸೇರಿದಂತೆ ಹಿಂದಿನ ಸರ್ಕಾರದ ಹಲವು ಹಗರಣಗಳ ತನಿಖೆಗೆ ಸರ್ಕಾರ ಎಸ್​ಐಟಿ ರಚನೆ ಸೇರಿ ಕಾನೂನಾತ್ಮಕ ಆದೇಶಗಳನ್ನು ಸೋಮವಾರ ಹೊರಡಿಸಿತ್ತು. ಅದರಂತೆ 545 ಎಸ್​ಐ ನೇಮಕಾತಿ ಹಗರಣ, ನಾಲ್ಕು ವೈದ್ಯ ಕಾಲೇಜು ನಿರ್ಮಾಣ ಕಾಮಗಾರಿ, ನೀರಾವರಿ ಯೋಜನೆಗಳಲ್ಲಿ ಅಕ್ರಮಗಳು ಕೂಡ ತನಿಖೆಗೆ ಒಳಗಾಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net