ಸಿಎಂಗೆ ಒಳಮೀಸಲಾತಿ ಮಧ್ಯಂತರ ವರದಿ ಸಲ್ಲಿಸಿದ ನ್ಯಾ. ನಾಗಮೋಹನ್ ದಾಸ್​

MEESALATHI
Published on

Bangalore: ದಲಿತ ಸಮುದಾಯಗಳಿಗೆ ಒಳಮೀಸಲಾತಿ ಜಾರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಗಳ ಮಧ್ಯೆ, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಲಾಗಿದೆ.

ಗುರುವಾರ (27) ಕ್ಯಾಬಿನೆಟ್ ಸಭೆಗೂ ಮುನ್ನ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಿಎಂ ಸಿದ್ದರಾಮಯ್ಯ ರವರಿಗೆ ಮಧ್ಯಂತರ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ವರದಿ ಸಲ್ಲಿಸಿದ ನಂತರ ಮಾತನಾಡಿದ ನ್ಯಾಯಮೂರ್ತಿ ನಾಗಮೋಹನ್ ದಾಸ್, ಎರಡು ತಿಂಗಳುಗಳಿಂದ ಸೂಕ್ತ ಅಧ್ಯಯನ ಮಾಡಿ ವರದಿಯನ್ನು ತಯಾರು ಮಾಡಿ ಸುಮಾರು 104 ಪುಟಗಳ ವರದಿಯನ್ನು ಸರ್ಕಾರಕ್ಕೆ ಕೊಟ್ಟಿದ್ದೇವೆ. ಮಧ್ಯಂತರ ವರದಿ ಕೊಡಿ ಅಂತ ಸರ್ಕಾರವೂ ಕೇಳಲಿಲ್ಲ ನಾವೇ ಸ್ವ ಇಚ್ಛೆಯಿಂದ ವರದಿಯನ್ನು ‌ನೀಡಿದ್ದೇವೆ. ಇದೀಗ ಸರ್ಕಾರ ಏನು ತೀರ್ಮಾನ ಮಾಡುತ್ತೊ ನೋಡಬೇಕಿದೆ ಎಂದರು.

ಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಿರುವುದರಿಂದ ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು. ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ. ಮಧ್ಯಂತರ ವರದಿ ಈಗ ನನ್ನ ಕೈಯಿಂದ ಸರ್ಕಾರದ ಕೈ ಸೇರಿದೆ ಮುಂದಿನ ಕ್ರಮವನ್ನ ಸರ್ಕಾರವೇ ತೆಗೆದುಕೊಳ್ಳಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net