ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಜೋಯ್ಮಲ್ಯ ಬಾಗ್ಚಿ ಪ್ರಮಾಣ ವಚನ ಸ್ವೀಕಾರ | Joymalya Bagchi

dk - 2025-03-17T132048.662
Published on

Joymalya Bagchi : ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಇಂದು(ಮಾ.17) ಜೋಯ್ಮಲ್ಯ ಬಾಗ್ಚಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ನ್ಯಾಯಮೂರ್ತಿ ಬಾಗ್ಚಿಗೆ ಪ್ರಮಾಣ ವಚನ ಬೋಧಿಸಿದರು.

ಮಾರ್ಚ್ 6 ರಂದು ನಡೆದ ಸಭೆಯಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಬಾಗ್ಚಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಯನ್ನಾಗಿ ಬಡ್ತಿ ನೀಡಲು ಶಿಫಾರಸು ಮಾಡಿತು. ಅದರಂತೆ ಕಳೆದ ವಾರ, ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸನ್ನು ಅನುಸರಿಸಿ, ಕೇಂದ್ರ ಸರ್ಕಾರ ಮಾರ್ಚ್ 10 ರಂದು ಕೋಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಅನುಮೋದನೆ ನೀಡಿತು.

ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರು 13 ವರ್ಷಗಳಿಗೂ ಹೆಚ್ಚು ಕಾಲ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಸುಪ್ರಿಂ ಕೋರ್ಟ್​ನ ನ್ಯಾಯಮೂರ್ತಿಯಾಗಿರುವ ವಿಶ್ವನಾಥನ್​ ಅವರು 2031 ಮೇ 31ರಂದು ನಿವೃತ್ತರಾಗಲಿದ್ದು, ಅದೇ ಸಮಯದಲ್ಲಿ ಜೋಯ್ಮಲ್ಯ ಬಾಗ್ಚಿ ಅವರು ಸಿಜೆಐ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ ಮತ್ತು 2031, ಅಕ್ಟೋಬರ್ 2 ರಂದು ನಿವೃತ್ತರಾಗುವವರೆಗೂ ಸಿಜೆಐ ಆಗಿ ಮುಂದುವರಿಯಲಿದ್ದಾರೆ.

ನ್ಯಾಯಮೂರ್ತಿ ಬಾಗ್ಚಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ವಹಿಸಿಕೊಳ್ಳುವ ಮೊದಲು ಆರು ವರ್ಷಗಳಿಗೂ ಹೆಚ್ಚು ಕಾಲ ಉನ್ನತ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಲಿದ್ದಾರೆ. 2013 ಜುಲೈ 18 ರಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ನ್ಯಾಯಮೂರ್ತಿ ಅಲ್ತಮಸ್ ಕಬೀರ್ ನಿವೃತ್ತರಾದ ನಂತರ, ಕೋಲ್ಕತ್ತಾ ಹೈಕೋರ್ಟ್‌ನಿಂದ ಭಾರತದ ಯಾವೊಬ್ಬ ಮುಖ್ಯ ನ್ಯಾಯಮೂರ್ತಿಯೂ ಸಿಜೆಐ ಸ್ಥಾನವನ್ನು ಅಲಂಕರಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net