

ನವದೆಹಲಿ: ಮಾರ್ಚ್ನಲ್ಲಿ ಕಾಂಗ್ರೆಸ್ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಕರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ ಇಬ್ಬರಲ್ಲೂ ಕೊವಿಡ್-19 ಕಾಣಿಸಿಕೊಂಡಿದ್ದು, ಅವರು ದಕ್ಷಿಣ ದೆಹಲಿಯಲ್ಲಿರುವ ಮ್ಯಾಕ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಇದನ್ನೂ ಓದಿ: ಪತ್ನಿಯ ಯೋಗಾಭ್ಯಾಸ ವಿಡಿಯೋದಲ್ಲಿ ‘ಬೆತ್ತಲಾದ’ ನ್ಯೂಸ್ ಆ್ಯಂಕರ್…!
ಸಿಂಧಿಯಾ ಅವರಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಕರೊನಾ ಲಕ್ಷಣ ಇತ್ತು. ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ತಾಯಿಯನ್ನು ಟೆಸ್ಟ್ಗೆ ಒಳಪಡಿಸಿದಾಗ ಅವರಲ್ಲಿಯೂ ಪಾಸಿಟಿವ್ ಎಂದು ವರದಿ ಬಂದಿದೆ. ಆದರೆ ಅವರಿಗೆ ಯಾವುದೇ ಲಕ್ಷಣಗಳೂ ಇಲ್ಲ. ಇದನ್ನೂ ಓದಿ: 29ಕ್ಕೆ ವಿಧಾನ ಪರಿಷತ್ನ 7 ಸ್ಥಾನಗಳಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ
ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರಲ್ಲಿ ಕರೊನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಅವರನ್ನು ಗುರ್ಗಾಂವ್ನ ಆಸ್ಪತ್ರೆಯೊಂದರಲ್ಲಿ ಅಡ್ಮಿಟ್ ಮಾಡಲಾಗಿತ್ತು. ಸೋಮವಾರ ಡಿಸ್ಚಾರ್ಜ್ ಆಗಿದ್ದಾರೆ.
ಹಾಗೇ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಲ್ಲೂ ಜ್ವರ, ಗಂಟಲು ನೋವಿನಂತರ ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಇಂದು ಬೆಳಗ್ಗೆ ಕೊವಿಡ್-19 ಟೆಸ್ಟ್ಗೆ ಒಳಪಟ್ಟಿದ್ದಾರೆ. (ಏಜೆನ್ಸೀಸ್)