ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ತವರು ರಾಜ್ಯದ ಜನರಿಗೆ ಶುಭ ಸುದ್ದಿ ನೀಡಿದ ಜ್ಯೋತಿರಾದಿತ್ಯ ಸಿಂಧ್ಯಾ

jyothi
Published on

ನವದೆಹಲಿ: ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯವಾದ ಮಧ್ಯಪ್ರದೇಶದ ಜನರಿಗೆ ಇಂದು ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಉಡಾನ್​ ಯೋಜನೆಯಲ್ಲಿ ಮಧ್ಯಪ್ರದೇಶದಲ್ಲಿ ಜುಲೈ 16ರಿಂದ ಹೊಸದಾಗಿ 8 ವಿಮಾನಗಳು ಸಂಚಾರ ಆರಂಭಿಸಲಿವೆ. ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ-ಸೂರತ್-ಜಬಲ್ಪುರ, ಅಹಮದಾಬಾದ್-ಗ್ವಾಲಿಯರ್ ಅಹಮದಾಬಾದ್​ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಹೊಸ ವಿಮಾನಗಳನ್ನು ಸ್ಪೈಸ್ ಜೆಟ್ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವಾಲಯವು ಮತ್ತು ವಾಯುಯಾನ ಉದ್ಯಮವು ಉಡಾನ್ ಯೋಜನೆಯನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ವಿಚಾರವನ್ನು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ತೊರೆದ ನಂತರ ಕಳೆದ ವರ್ಷ ಬಿಜೆಪಿಗೆ ಸೇರಿದ ಜ್ಯೋತಿರಾದಿತ್ಯ ಸಿಂಧ್ಯಾ ಅವರು 33ನೇ ನಾಗರಿಕ ವಿಮಾನಯಾನ ಸಚಿವರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net