ಶಿಕ್ಷಣ ಇಲಾಖೆಯ ಅತ್ಯುತ್ತಮ ಜಿಲ್ಲಾ ಪ್ರಶಸ್ತಿಗೆ ಕೆ.ಕೆ.ಸುಷಾ ಆಯ್ಕೆ

ಚಿತ್ರ 4ಎಸ್ ಡಿ ಪಿ 7 ಕೆ ಕೆ ಸುಷಾ
ಕೆ.ಕೆ.ಸುಷಾ
Published on

ಸಿದ್ದಾಪುರ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕೊಡಗು ಜಿಲ್ಲಾ ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆಯಿಂದ ನೀಡುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಚೆನ್ನಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಕೆ.ಕೆ.ಸುಷಾ ಭಾಜನರಾಗಿದ್ದಾರೆ.

ಈ ಹಿಂದೆ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಪ್ರಗತಿಗೆ ಶಾಲಾ ಹಂತದಲ್ಲಿ ಕೈಗೊಂಡ ವಿಶಿಷ್ಟ ಕಾರ್ಯಕ್ರಮಗಳು ಹಾಗೂ ಸೇವಾ ಸಾಧನೆಯನ್ನು ಪರಿಗಣಿಸಿ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಶಿಕ್ಷಣ ಸಿಂಧು ಪ್ರಶಸ್ತಿ ಯೊಂದಿಗೆ ಶಿಕ್ಷಣ ಸಾರಥಿ, ಶಿಕ್ಷಕ ಸಿರಿ ಸೇರಿದಂತೆ ಇತ್ತೀಚೆಗೆ ಕಾವೇರಿ ರತ್ನ ಪ್ರಶಸ್ತಿ ಪಡೆದುಕೊಂಡಿದ್ದರು. ಇದರೊಂದಿಗೆ ವಿವಿಧ ಸಂಘ ಸಂಸ್ಥೆಗಳಿಂದಲೂ ಪ್ರಶಸ್ತಿ ಲಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net