ಕಾಂಗ್ರೆಸ್​ ಸೇರ್ಪಡೆ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿಆರ್​ಎಸ್ ಪಕ್ಷದ ಕೇಶವ್ ರಾವ್ !

cm
Published on

ತೆಲಂಗಾಣ: ಭಾರತ್ ರಾಷ್ಟ್ರ ಸಮಿತಿ ತೆಲಂಗಾಣದಲ್ಲಿ ಭಾರಿ ಹಿನ್ನಡೆ ಅನುಭವಿಸಿದೆ. ಬಿಆರ್‌ಎಸ್ ಪಕ್ಷದ ರಾಜ್ಯಸಭೆ ಸದಸ್ಯ ಕೇಶವ್ ರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಉಪರಾಷ್ಟ್ರಪತಿ ಜಗದೀಶ್ ಧನಕರ್ ಅವರಿಗೆ ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದರು. ಇಂದು ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಉಪ ರಾಷ್ಟ್ರಪತಿ ಕಚೇರಿ ಮೂಲಗಳು ತಿಳಿಸಿವೆ.

ಕೇಶವ್​ ರಾವ್ ಅವರು ಬುಧವಾರ ಬಿಆರ್‌ಎಸ್ ಪಕ್ಷ ತೊರೆದು ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಪಕ್ಷದ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು.

ಕೇಶವ್ ರಾವ್ ಅವರು 2020ರಿಂದ ತೆಲಂಗಾಣದಿಂದ ರಾಜ್ಯಸಭೆ ಸದಸ್ಯರಾಗಿದ್ದರು. ಕೇಶವ್​ ರಾವ್ ರಾಜೀನಾಮೆಯಿಂದ ರಾಜ್ಯಸಭೆಯಲ್ಲಿ ಒಟ್ಟು 16 ಸ್ಥಾನಗಳು ಖಾಲಿ ಉಳಿದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net