

ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಕೆ.ಆರ್.ನಿರೂಪಾ, ಇಒ ಡಿ.ಸಿ.ಶ್ರುತಿ, ಟಿಎಚ್‌ಒ ಡಾ.ವಿ.ಆರ್.ನಾಗೇಶ್, ಸಿಪಿಐ ಬಿ.ಆರ್.ಪ್ರದೀಪ್ ಇತರರಿದ್ದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ್ ಮಾತನಾಡಿ, ಕೋವಿಡ್-19 ರ ಲಾಕ್‌ಡೌನ್ ಸಂದರ್ಭದಲ್ಲಿ ಯಾವುದೇ ಅವಘಡಗಳು ಆಗದಂತೆ ಸುರಕ್ಷತಾ ಕ್ರಮಗಳನ್ನು ವಹಿಸಲಾಗಿದೆ ಎಂದರು.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ಅನನುಕೂಲತೆಗಳು ಆಗದಂತೆ ಎಚ್ಚರ ವಹಿಸಬೇಕು. ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಎಲ್ಲಾ ಚಿಕಿತ್ಸೆಗಳ ವೈದ್ಯರು ಲಭ್ಯವಾಗುವಂತೆ ಕ್ರಮ ವಹಿಸಬೇಕು. ತುರ್ತು ಚಿಕಿತ್ಸೆಗೆ ಕಡ್ಡಾಯವಾಗಿ ವೈದ್ಯರು ಇರುವಂತೆ ಎಚ್ಚರ ವಹಿಸಬೇಕು. ಗ್ರಾಮೀಣ ಪ್ರದೇಶಗಳಿಂದ ಚಿಕಿತ್ಸೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ದೊರಕುವಲ್ಲಿ ವಿಳಂಬವಾಗದಂತೆ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಎಲ್ಲ ರೀತಿಯ ಸೌಲಭ್ಯಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ದೊರಕುವಂತಾಗಲಿ ಎಂದು ಶಾಸಕ ಕೆ.ಮಹದೇವ್ ಆಶಯ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಆಡಳಿತ ಸಿಬ್ಬಂದಿ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.
ವಿಜಯವಾಣಿ ಸುದ್ದಿಜಾಲ ಪಿರಿಯಾಪಟ್ಟಣ