ಕನ್ನಡದ ನಿತ್ಯೋತ್ಸವ ಕವಿ ಡಾ.ಕೆ.ಎಸ್​. ನಿಸಾರ್​ ಅಹಮ್ಮದ್​ ಇನ್ನಿಲ್ಲ

nisar
Published on

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಡಾ. ಕೆ.ಎಸ್​.ನಿಸಾರ್​ ಅಹಮ್ಮದ್ (84) ನಿಧನರಾಗಿದ್ದಾರೆ.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ನಿವಾಸದಲ್ಲಿ ಅವರು ಭಾನುವಾರ ಮಧ್ಯಾಹ್ನ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿತ್ಯೋತ್ಸವ ಕವಿ ಎಂದೇ ಅವರು ಕನ್ನಡ ಸಾರಸ್ವತ ಲೋಕದಲ್ಲಿ ಪ್ರಖ್ಯಾತರಾಗಿದ್ದರು. ಅವರು ಫೆ.5 1936ರಂದು ದೇವನಹಳ್ಳಿಯಲ್ಲಿ ಜನಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net