

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್)ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಅರ್ಜಿ ಸಲ್ಲಿಸಲು ಆ.22 ಕಡೆಯ ದಿನವಾಗಿದೆ.
ಅಧಿಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಒಟ್ಟು 41 ವಿಷಯದಲ್ಲಿ ಅರ್ಹತೆ ಪರೀಕ್ಷೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿ ಇಲ್ಲ.
ನ.24ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳುಕೆಇಎ ಜಾಲತಾಣ kea.kar.nic.in ಗೆ ಭೇಟಿ ನೀಡಬಹುದಾಗಿದೆ.