ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆ-ಸೆಟ್) ಸಂಬಂಧಿಸಿದಂತೆ ಜು.22ರಿಂದ ಆರಂಭವಾಗಬೇಕಿದ್ದ ಅರ್ಜಿ ಸಲ್ಲಿಕೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿದೆ. ಜು.29ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ನಿಗದಿಯಂತೆ ನ.24ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.