

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ ಸೆಟ್-2025) ಪ್ರವೇಶ ಪತ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಬಿಡುಗಡೆ ಮಾಡಿದೆ.
ನ.2ರಂದು ಪರೀಕ್ಷೆ ನಿಗದಿಯಾಗಿದ್ದು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ಬ 1ಗಂಟೆಯವರೆಗೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ನಡೆಯಲಿದೆ. ಕೆಲ ವಿಷಯದ ಪರೀಕ್ಷೆಗಳಿಗೆ ಬೆಂಗಳೂರಿನಲ್ಲಿ ಮಾತ್ರ ಕೇಂದ್ರವಾಗಿದೆ. ಅಭ್ಯರ್ಥಿಗಳು ಅರ್ಜಿ ಸಂಖ್ಯೆಯನ್ನು ನಮೂದಿಸಿ ಪ್ರವೇಶಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳಿಗೆ ಸೂಚನೆಗಳು
ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು. ಅಭ್ಯರ್ಥಿಗಳ ೆಟೋ ತೆಗೆದು ಪರಿಶೀಲಿಸಿ ಪ್ರವೇಶ ನೀಡಲಾಗುತ್ತದೆ. 9.30ರ ನಂತರ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. 10 ಗಂಟೆಯ ನಂತರ ಪರೀಕ್ಷಾ ಕೊಠಡಿಯನ್ನು ಪ್ರವೇಶಿಸಲು ಅನುಮತಿ ಇರುವುದಿಲ್ಲ.
ಪ್ರವೇಶಪತ್ರದ ಜತೆಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು. ಪ್ರಾಧಿಕಾರ ನಿಗದಿಪಡಿಸಿರುವ ವಸ ಸಂಹಿತೆ ಪಾಲಿಸದಿದ್ದರೆ ಪ್ರವೇಶ ನೀಡಲಾಗುವುದಿಲ್ಲ.