ಕೆ-ಸೆಟ್: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

kea
Published on

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕೆ (ಕೆಸೆಟ್- 24)ಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆ.28ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಆ.22 ಕೊನೆ ದಿನವಾಗಿತ್ತು. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಆ.30ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net