ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಶಿವರಾಂ

29rajesh4
Published on

ಚಾಮರಾಜನಗರ: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ಕೆ.ಶಿವರಾಂ ರಾಜಕೀಯ ಅಧಿಕಾರದ ಕನಸು ಕಮರಿದೆ.

ಕೆ.ಶಿವರಾಂ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಇವರು ಮುಂದಿನ ಲೋಕಸಭೆ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕ್ಷೇತ್ರದಲ್ಲಿ ಸಂಚಾರ ಮಾಡಿ ಮತದಾರರ ಸಂಪರ್ಕ ಸಾಧಿಸಿದ್ದರು. ಇವರ ಬೆಂಬಲಿಗರು ಶಿವರಾಂಗೆ ಟಿಕೆಟ್ ನೀಡಬೇಕೆಂದು ಒತ್ತಾಯ ಮಾಡಿದ್ದರು. ಇದಕ್ಕೂ ಮುನ್ನ 2019ರಲ್ಲಿ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸಿ ಚಾಮರಾಜನಗರದಲ್ಲಿ ಮನೆ ಮಾಡಿ ಟಿಕೆಟ್ ಪಡೆಯಲು ಸಾಕಷ್ಟು ಕಸರತ್ತು ನಡೆಸಿದ್ದರು. ಆದರೆ, ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net