ಸಿಎಂ ಕರೆದ ಮಹತ್ವದ ಸಭೆಗೆ ಆರೋಗ್ಯ- ವೈದ್ಯಕೀಯ ಸಚಿವರೇ ಗೈರು!

sudhakar and sriramul
Published on

ಬೆಂಗಳೂರು: ಸಿಎಂ ನೇತೃತ್ವದಲ್ಲಿ ನಡೆದ ಕರೊನಾ ನಿಯಂತ್ರಣ ಕುರಿತ ಮಹತ್ವದ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರುಗಳೇ ಇರಲಿಲ್ಲ!

ಬೆಂಗಳೂರಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 12ಕ್ಕೆ ಬಿಎಸ್​ವೈ ನಡೆಸಿದರು. ಆದರೆ ಈ ಸಭೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಗೈರಾಗಿದ್ದು, ಕರೊನಾ ನಿಯಂತ್ರಣಕ್ಕಿಂತ ಇವರಿಗೆ ಬೇರೆ ಯಾವ ಕೆಲಸ ಇಂಪಾರ್ಟೆಂಟ್ ಇತ್ತು ಎಂಬ ಟೀಕೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಇದನ್ನೂ ಓದಿರಿ video/ ಕರೊನಾ ವಾರ್ಡಿನಲ್ಲಿ ‘ನರಕ’ ದರ್ಶನ, ಶೌಚಗೃಹದ ನೀರನ್ನೇ ಕುಡಿದ ಸೋಂಕಿತರು!

ಬೆಂಗಳೂರಿನಲ್ಲಿ ಕೋವಿಡ್19 ನಿಯಂತ್ರಣದ ಉಸ್ತುವಾರಿ ಹೊತ್ತಿರುವ ಸಚಿವ ಸುಧಾಕರ್ ಅವರೇ ಈ ಸಭೆಗೆ ಗೈರಾಗಿರೋದು ವಿಪರ್ಯಾಸ. ಮೊಳಕಾಲ್ಮುರು ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯಲ್ಲಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಡಿಜಿಐಜಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಚಿವ ಆರ್.ಅಶೋಕ್, ಸಿಎಸ್ ವಿಜಯ್ ಭಾಸ್ಕರ್ ಉಪಸ್ಥಿತರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net