ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಉದ್ಯೋಗ

k.venkatesh
Published on

ಚಾಮರಾಜನಗರ: ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಮೃತಪಟ್ಟ ಸೋಂಕಿತರ ಕುಟುಂಬಸ್ಥರಿಗೆ ೆ.1ರಿಂದ ಉದ್ಯೋಗ ನೀಡಲಾಗುವುದು ಎಂದು ರೇಷ್ಮೆ, ಪಶುಸಂಗೋಪನಾ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೊತ್ಸವ ದಿನಾಚರಣೆಯಲ್ಲಿ ಅವರು ಮಾತನಾಡಿ, ಸಂತ್ರಸ್ತರು ಹೊರಗುತ್ತಿಗೆ ನೌಕರಿ ಪಡೆಯುವ ಸಂಬಂಧ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಮಾಹಿತಿ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net