ನಟ ದರ್ಶನ್​ ಅಭಿಮಾನಿಗಳಿಗೆ ಗುಡ್​ ನ್ಯೂಸ್​; ಸದ್ದಿಲ್ಲದೆ ಬಿಡುಗಡೆಗೆ ಸಜ್ಜಾದ ಕಾಟೇರ

kaatera
Published on

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ, ತರುಣ್​ ಸುಧೀರ್​ ನಿರ್ದೇಶನದ ಬಹು ನಿರೀಕ್ಷಿತ ಕಾಟೇರ ಚಿತ್ರ ತಂಡದಿಂದ ಹೊಸ ಅಪ್ಡೇಟ್​ ಒಂದು ಹೊರ ಬಿದಿದ್ದು, ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಗರಿಗೆದರಿದೆ.

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿನಯದ ಕಾಟೇರ ಚಿತ್ರದ ಬಿಡುಗಡೆ ದಿನಾಂಕ ಹೊರ ಬಿದಿದ್ದು, ಡಿಸೆಂಬರ್ 29ರಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಆಚರಣೆಗೆ ಸಿದ್ದರಾಗಿ ಡಿಸೆಂಬರ್​ 29ರಂದು ಚಂಡಮಾರುತ ಬರಲಿದೆ ಎಂದು ಬರೆದುಕೊಂಡಿದ್ದಾರೆ.

ಈ ಚಿತ್ರದ ಮೂಲಕ ಕನಸಿನ ರಾಣಿ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್​ ಸ್ಯಾಂಡಲ್​ವುಡ್​ಗೆ ಪಾದರ್ಪಣೆ ಮಾಡುತ್ತಿದ್ದು, ಚಿತ್ರದಲ್ಲಿ ಹಿರಿಯ ನಟರಾದ ಬಿರಾದಾರ್, ಜಗಪತಿ ಬಾಬು, ಕುಮಾರ್​ ಗೋವಿಂದ್, ಮಾಸ್ಟರ್ ರೋಹಿತ್ ಮತ್ತು ಡ್ಯಾನಿಶ್ ಅಖ್ತರ್ ಸೈಫಿ ನಟಿಸಿದ್ದಾರೆ. ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ ಸುಧಾಕರ್ ಎಸ್ ರಾಜ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net