ಕನಕಗುರುಪೀಠದ ಶ್ರೀಗಳ ಆಶೀರ್ವಾದ ಪಡೆದ ನಡ್ಡಾ, ಬೊಮ್ಮಾಯಿ

30-byadagi-03A
Published on

ಬ್ಯಾಡಗಿ: ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಕಾಗಿನೆಲೆ ಕನಕ ಗುರುಪೀಠಕ್ಕೆ ಭೇಟಿ ನೀಡಿ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡರು.
ಕಾಗಿನೆಲೆ ಬಳಿ ನಿರ್ಮಿಸಿದ ಹೆಲಿಪ್ಯಾಡ್‌ನಿಂದ ನೇರವಾಗಿ ಕನಕಗುರುಪೀಠಕ್ಕೆ ಬಂದು ನಿರಂಜನಾನಂದಪುರಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದು ಕೆಲಕಾಲ ಶ್ರೀಗಳೊಂದಿಗೆ ಕುಶಲೋಪರಿ ವಿಚಾರಿಸಿದರು. ನಂತರ ರಾಜಕೀಯ, ಧಾರ್ಮಿಕ ವಿಚಾರಗಳ ಕುರಿತು ಚರ್ಚಿಸಿದರು. ಶ್ರೀಯವರು ಜೆ.ಪಿ. ನಡ್ಡಾ ಹಾಗೂ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ, ಮಾಜಿ ಸಚಿವ ಬಿ.ಸಿ. ಪಾಟೀಲ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಪಕ್ಷದ ಹಿರಿಯ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net