

ಕಲಬುರಗಿ: ( Kalaburagi Accident )ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.
ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಮಿನಿ ಬಸ್ನಲ್ಲಿದ್ದ ಒಟ್ಟು 31 ಜನರ ಪೈಕಿ ಐವರು ಸಾವನ್ನಪ್ಪಿದ್ದಾರೆ. 11 ಜನರಿಗೆ ಗಾಯಗಳಾಗಿವೆ.
ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.