

ಕಲಬುರಗಿ : ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಆಕಸ್ಮಿಕ ಬೆಂಕಿ ತಗುಲಿ ಬೋಗಿ ಸುಟ್ಟಿದೆ.
ಅಂದಾಜು ರಾತ್ರಿ 2 ಗಂಟೆ ವೇಳೆಯಲ್ಲಿ ಬೋಗಿಗೆ ಬೆಂಕಿ ಹರಡಿದೆ ಎಂದು ರೈಲು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಗೂಡ್ಸ್ ರೈಲನ್ನು ನಿಲ್ದಾಣದಲ್ಲಿ ನಿಲ್ಲಿಸಿ ಸಿಬ್ಬಂದಿಗಳು ಬೋಗಿಯಲ್ಲಿ ಮಲಗಲು ಅಣಿಯಾಗುತ್ತಿದ್ದರು. ಈ ವೇಳೆ ಮಲಗುವ ಬೋಗಿಗೆ ಆಕಸ್ಮಿಕವಾಗಿ ಬೆಂಕಿ ಹರಡಿರುವುದು ಪತ್ತೆಯಾಯಿತು. ಕೂಡಲೇ ಸಿಬ್ಬಂದಿಗಳು ರೈಲು ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ರೈಲು ನಿಲ್ದಾಣದ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಬೆಂಕಿ ಅವಘಡದಿಂದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್ಪಿಎಫ್ ವಾಡಿ ರೈಲ್ವೇ ಪೊಲೀಸರು ದೂರು ದಾಖಲಿಸಿ ಬೆಂಕಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್)