ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ: ಕಲಬುರಗಿ ನಗರದಲ್ಲಿ ನಡೆದ ಘಟನೆ

youth Death
Published on

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಶನಿವಾರ (ಸೆ.18) ರಾತ್ರಿ ನಡೆದಿದೆ.

ಜಮೀರ್(23) ಕೊಲೆಯಾದ ಯುವಕ. ಈತ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ. ಕಳದೆ ರಾತ್ರಿ ಐದಾರು ಜನ ದುಷ್ಕರ್ಮಿಗಳು ಸೇರಿಕೊಂಡು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net