

ಬೆಂಗಳೂರು: ಬುಧವಾರ ತಡರಾತ್ರಿ ಕಲಬುರಗಿ ನಗರದ ಹಫ್ತ್ ಗುಂಬಜ್ ಬಳಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್ ಮನಬಂದಂತೆ ಕಾಂಗ್ರೆಸ್ ಕಾರ್ಯಕರ್ತನನ್ನು ಥಳಿಸಿದ್ದು, ಕೂಡಲೇ ಅವರನ್ನು ಅಮಾನತು ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿದ ಅವರು, ಕಲಬುರಗಿ ಪೊಲೀಸ್ ಕಮೀಷನರ್ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ಪೊಲೀಸ್ ಕಮೀಷನರ್ರನ್ನು ಈ ಕೂಡಲೇ ಅಮಾನತು ಮಾಡುವಂತೆ ಸಿಎಂಗೆ ಆಗ್ರಹಿಸಿದ್ದಾರೆ. ಯಾವುದೇ ತಪ್ಪು ಮಾಡದಿದ್ದರೂ ಹೀಗೆ ಥಳಿಸಿದ್ದು ಖಂಡನೀಯ, ಅಮಾನತು ಮಾಡುವ ಮೂಲಕ ಕಾರ್ಯಕರ್ತನಿಗೆ ನ್ಯಾಯ ಒದಗಿಸಬೇಕು ಎಂದಿದ್ದಾರೆ.