ಕಲಶೇಶ್ವರ ಜಾತ್ರೋತ್ಸವಕ್ಕೆ ಚಾಲನೆ

kalasa jatre
ಕಳಸ ಕಲಶೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಯಿತು.
Published on

ಕಳಸ: ಇಲ್ಲಿಯ ಶ್ರೀ ಕಲಶೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಗುರುವಾರ ಧ್ವಜಾರೋಹಣ ನೆರವೇರಿತು. ಬುಧವಾರ ಗಣಪತಿ ಪೂಜೆ ಅಂಕುರಾರ್ಪಣದೊಂದಿಗೆ ಜಾತ್ರಾ ಮಹೋತ್ಸವ ಆರಂಭಗೊಂಡಿತು. ಧ್ವಜಾರೋಹಣದ ಮುಂಚಿತವಾಗಿ ದೇವರಲ್ಲಿ ವಿಶೇಷ ಪ್ರಾರ್ಥನೆ ನಂತರ ಹೋಮಗಳು ನಡೆಯಿತು. ಬಳಿಕ ದೇವಸ್ಥಾನದ ಮುಂಭಾಗದಲ್ಲಿರುವ ಧ್ವಜಸ್ತಂಭಕ್ಕೆ ಧಾರ್ಮಿಕ ವಿಧಿ ವಿಧಾನ ನೆರವೇರಿಸಲಾಯಿತು. ನಂತರ ಮಹಾಪೂಜೆ ನೆರವೇರಿತು. ಭಕ್ತರಿಂದ ಹಸಿರುವಾಣಿ ಸಮರ್ಪಣೆ ನಡೆದು ಕೌತುಕೋತ್ಸವ ವೃಷಭಾರೋಹಣ ನಡೆಯಿತು. ಫೆ.20ರಂದು ರಥೋತ್ಸವ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net