

ಹೈದರಾಬಾದ್: ಪ್ರಭಾಸ್ ಅಭಿನಯದ 'ಕಲ್ಕಿ 2898 ಎಡಿ' ಓಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ಚಿತ್ರದ ಹಿಂದಿ ಆವೃತ್ತಿಯು ಈಗಾಗಲೇ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಿದ್ದರೆ, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಆವೃತ್ತಿಗಳು ಆ.22 ರಿಂದ ಅಮೆಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆಗುತ್ತವೆ.
ಕಲ್ಕಿ 2989 ಎಡಿ ಜೂನ್ 27 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನದ ನಂತರ, ವಿಶ್ವಾದ್ಯಂತ 1041.6 ಕೋಟಿ ರೂ ಗಳಿಸಿತ್ತು. ಬಳಿಕ ಚಿತ್ರದ ಹಿಂದಿ ಆವೃತ್ತಿಯು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗಿದ್ದರೆ, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಆವೃತ್ತಿಗಳು ಆಗಸ್ಟ್ 22 ರಿಂದ ಅಮೆಜಾನ್ ಪ್ರೈಮ್ ನಲ್ಲಿ ಸ್ಟ್ರೀಮ್ ಆಗುತ್ತವೆ.
ಸ್ಟ್ರೀಮಿಂಗ್ ದೈತ್ಯ ಅಮೆಜಾನ್ ಪ್ರೈಮ್ ಇನ್ಸ್ಟಾಗ್ರಾಮ್ ನಲ್ಲಿ ಕಲ್ಕಿ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿದೆ.
ಪ್ರಭಾಸ್ ಜೊತೆಗೆ, ಕಲ್ಕಿ 2898 AD ನಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಮತ್ತು ದೀಪಿಕಾ ಪಡುಕೋಣೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.