

ಅಮೆರಿಕಾ: ಜೂನ್.27ರಂದು ಬಹುತೇಕ ಚಿತ್ರಮಂದಿಗಳಲ್ಲಿ ಬಿಡುಗಡೆಗೊಂಡ ಟಾಲಿವುಡ್ ರೆಬೆಲ್ ಸ್ಟಾರ್, ನಟ ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯಾ ‘ಕಲ್ಕಿ 2898 ಎಡಿ’ ಸಿನಿಮಾ ಇದೀಗ ಜಾಗತಿಕ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂ. ಕ್ಲಬ್ ಸೇರುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ. ಪ್ರೇಕ್ಷಕರಿಂದ ತುಂಬಿ ಹೋಗುತ್ತಿರುವ ಭಾರತದ ಥಿಯೇಟರ್ಗಳಲ್ಲಿ ಕಲ್ಕಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಈ ಮಧ್ಯೆ ಉತ್ತರ ಅಮೇರಿಕಾದಲ್ಲಿ ಸಿನಿಮಾ ಮತ್ತೊಂದು ಮೈಲಿಗಲ್ಲು ತಲುಪಿದೆ.
ನಾಗ್ ಅಶ್ವಿನ್ ನಿರ್ದೇಶನದ ಸೈನ್ಸ್-ಫಿಕ್ಷನ್ ಚಿತ್ರ ಸದ್ಯ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನವನ್ನು ಮುಂದುವರೆಸಿದ್ದು, ಕೇವಲ ಉತ್ತರ ಅಮೆರಿಕಾದಲ್ಲಿ 17.5 ಮಿಲಿಯನ್ ಡಾಲರ್ ಗಳಿಕೆ ಕಂಡಿದೆ. ಈ ಮೈಲಿಗಲ್ಲನ್ನು ಭಾನುವಾರದ ಅಂತ್ಯದ ವೇಳೆಗೆ ಸಿನಿಮಾ ತಲುಪಿರುವುದು ಚಿತ್ರತಂಡಕ್ಕೆ ಭಾರೀ ಸಂತಸ ತಂದಿದೆ. ಇಲ್ಲಿಯವರೆಗೆ ಈ ಪ್ರದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಎರಡನೇ ಭಾರತೀಯ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಕಲ್ಕಿ ಪಾತ್ರವಾಗಿದೆ.
ಚಿತ್ರದಲ್ಲಿ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ರಾಜೇಂದ್ರ ಪ್ರಸಾದ್, ದಿಶಾ ಪಟಾನಿ, ಶೋಬನಾ ಸೇರಿದಂತೆ ಮುಂತಾದವರ ತಾರಾಗಣವಿದೆ. ವೈಜಯಂತಿ ಮೂವೀಸ್ ಬ್ಯಾನರ್ನಡಿ ತೆರೆಗೆ ಅಪ್ಪಳಿಸಿದ ಈ ಬಿಗ್ ಬಜೆಟ್ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ನೀಡಿದ್ದಾರೆ,(ಏಜೆನ್ಸೀಸ್).