ಕಲ್ಯಾಣ ಕರ್ನಾಟಕ ಉತ್ಸವ ಅಚ್ಚುಕಟ್ಟಾಗಲಿ

05 MANJU 04
Published on

ಹೊಸಪೇಟೆ: ಕಲ್ಯಾಣ ಕರ್ನಾಟಕ ಉತ್ಸವ ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆ.17ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳು ಎರಡೂ ಕಾರ್ಯಕ್ರಮಗಳಿಗೆ ತಮ್ಮ ಸಿಬ್ಬಂದಿಗಳೊAದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಜಿಲ್ಲಾ ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಜಿಲ್ಲಾಡಳಿತ ಕಾರ್ಯಲಯಕ್ಕೆ ವಿಶೇಷ ದೀಪಾಲಂಕಾರ ಮಾಡಬೇಕು. ಕ್ರೀಡಾಂಗಣದಲ್ಲಿ ಕುಡಿವ ನೀರಿನ ವ್ಯವಸ್ಥೆಗೆ ಅಗತ್ಯ ಕ್ರಮ ವಹಿಸಬೇಕು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಿಯಾಧಿಕಾರಿ ವಿವೇಕಾನಂದ, ಜಿ.ಪಂ. ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ, ಡಿಎಚ್‌ಒ ಶಂಕರ ನಾಯ್ಕ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಪ್ರಭುಲಿಂಗ ಎಸ್.ತಳಿಕೆರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್.ಶ್ವೇತಾ, ತಹಸೀಲ್ದಾರ್ ಶೃತಿ.ಎಂ.ಮಳ್ಳನಗೌಡ್ರ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net