ದೆಹಲಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಣೆ

khooba
Published on

ನವದೆಹಲಿ: ದೆಹಲಿಯ ಕರ್ನಾಟಕ ಸಂಘದಲ್ಲಿ ಇಂದು ಕಲ್ಯಾಣ ಕರ್ನಾಟಕದ ವಿಮೋಚನಾ ದಿನ ಆಚರಿಸಲಾಯಿತು. ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಖಾತೆ ಸಚಿವ ಭಗವಂತ ಖೂಬಾ ಅವರು ಧ್ವಜಾರೋಹಣ ನೆರವೇರಿಸಿದರು. ದೆಹಲಿಯಲ್ಲಿ ವಾಸವಾಗಿರುವ ಕಲ್ಯಾಣ ಕರ್ನಾಟಕದ ಮೂಲದ ಜನರು ಸಭೆಯಲ್ಲಿ ಭಾಗವಹಿಸಿದರು.

ದೆಹಲಿಯಲ್ಲಿ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಆಚರಿಸುತ್ತಿರುವ ಬಗ್ಗೆ ಕೇಂದ್ರ ಸಚಿವ ಖೂಬಾ ಪ್ರಶಂಸೆ ವ್ಯಕ್ತಪಡಿಸಿದರು. ಇಂತಹ ಉತ್ಸವಗಳನ್ನು ಮಾಡುವುದರಿಂದ ಇತಿಹಾಸ ನನೆಪು ಮಾಡಿಕೊಟ್ಟಂತಾಗುತ್ತದೆ ಎಂದರು.

ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ ಕಲ್ಯಾಣ ಕರ್ನಾಟಕದ ನಮಗೆ ಸ್ವಾತಂತ್ರ್ಯ ಸಿಗಲಿಲ್ಲ. ಈ ಭಾಗಕ್ಕೆ ಒಂದು ವರ್ಷ ತಡವಾಗಿ ಸ್ವಾತಂತ್ರ್ಯ ಸಿಕ್ಕಿತು. ಇದಕ್ಕೆ ನಮ್ಮ ಪೂರ್ವಜರ ತ್ಯಾಗ, ಬಲಿದಾನ ಕಾರಣವಾಯ್ತು ಎಂದು ಖೂಬಾ ಸ್ಮರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net