

ಚಿತ್ರದುರ್ಗ: ಕಾಂಗ್ರೆಸ್ ಅಧಿಕಾರವಧಿಯ ಜನಪರ ಯೋಜನೆಗಳು ಹಾಗೂ ಬಿಜೆಪಿ ಸರ್ಕಾರಗಳ ಭ್ರಷ್ಟಾಚಾರದ ವಿವರಗಳನ್ನು ಮನೆ, ಮನೆಗೆ ತಲುಪಿಸುವಂತೆ ಎಐಸಿಸಿ ಕಾರ್ಯದರ್ಶಿ ಮಯೂರ್ ಜೈಕುಮಾರ್ ಕಾರ್ಯಕರ್ತರಿಗೆ ಸೂಚಿಸಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ರಾಹುಲ್‌ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಗೆ ನಡುಕ ಶುರುವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಕಾರ್ಯಕರ್ತರು ಹೊಣೆ ಅರಿತು ಕೆಲಸ ಮಾಡಬೇಕು ಎಂದರು.
ಬ್ಲಾಕ್ ಕಮಿಟಿ ಮತ್ತು ಪಂಚಾಯಿತಿ ಮಟ್ಟದ ಸಮಿತಿ ರಚಿಸಿ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಲು ತಾಕೀತು ಮಾಡಿದರು. ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಎ.ವಿ.ಉಮಾಪತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಹನುಮಲಿ ಷಣ್ಮುಖಪ್ಪ, ಆರ್.ಕೆ.ಸರ್ದಾರ್, ಭೀಮಸಮುದ್ರದ ಜಿ.ಎಸ್.ಮಂಜುನಾಥ್, ಮುರಳಿಧರ ಹಾಲಪ್ಪ, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಆರ್.ಪ್ರಕಾಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ನಂದಿನಿ ಗೌಡ, ರಾಘವೇಂದ್ರ, ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ಒ.ಶಂಕರ್ ಇದ್ದರು.