30ರಂದು ಕನಕದಾಸರ ಜಯಂತಿ ಆಚರಣೆ

22 KRN-1
Published on

ಕೆ.ಆರ್.ನಗರ : ತಾಲೂಕು ಆಡಳಿತ ಮತ್ತು ಕುರುಬರ ಸಂಘದ ವತಿಯಿಂದ ನ.30ರಂದು ಭಕ್ತ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮರ ಜಯಂತಿಗಳ ಆಚರಣೆಗೆ ಸರ್ವರೂ ಸಹಕಾರ ನೀಡಬೇಕು ಎಂದರು.
ಚೀರ‌್ನಹಳ್ಳಿ ರಸ್ತೆಯ ಕನಕಗುರು ಪೀಠದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ತಾಲೂಕು ಕಚೇರಿಯ ಗಾಂಧೀಜಿ ಪ್ರತಿಮೆ ಬಳಿ ವೇದಿಕೆ ಕಾರ್ಯಕ್ರಮ ನಡೆಸಲಾಗುತ್ತದೆ. ಶ್ರೀ ಶಿವಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ನೋಟಿಸ್ ನೀಡಲು ಸೂಚನೆ: ತಾಲೂಕು ಆಡಳಿತದಿಂದ ನಡೆಯುವ ನಾಡಹಬ್ಬಗಳು ಮತ್ತು ಜಯಂತಿಗಳ ಆಚರಣಾ ಸಮಾರಂಭ ಹಾಗೂ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಬೇಕು. ಗೈರು ಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ಅವರು ತಹಸೀಲ್ದಾರ್‌ಗೆ ಸೂಚಿಸಿದರು. ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಅಮಿತ್.ವಿ.ದೇವರಹಟ್ಟಿ, ಕುರುಬರ ಸಂಘದ ಅಧ್ಯಕ್ಷ ಚೀರ‌್ನಹಳ್ಳಿ ಶಿವಣ್ಣ, ಉಪಾಧ್ಯಕ್ಷ ಕೆ.ಎಂ. ಶ್ರೀನಿವಾಸ್, ಜಿಪಂ ಮಾಜಿ ಸದಸ್ಯ ಜಿ.ಆರ್.ರಾಮೇಗೌಡ, ಪುರಸಭೆ ಸದಸ್ಯರಾದ ಕೋಳಿ ಪ್ರಕಾಶ್, ನಟರಾಜು ಇತರರು ಮಾತನಾಡಿದರು.
ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಪಂ ಇಒ ಜಿ.ಕೆ.ಹರೀಶ್, ಪುರಸಭಾ ಮುಖ್ಯಾಧಿಕಾರಿ ಡಾ.ಜಯಣ್ಣ, ಬಿಇಒ ಆರ್.ಕೃಷ್ಣಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರುಣ್ ಕುಮಾರ್, ಕುರುಬರ ಸಂಘದ ನಿರ್ದೇಶಕರಾದ ಬಿ.ಎಂ.ನಾಗರಾಜು, ಕೃಷ್ಣೇಗೌಡ, ಅಪ್ಪಾಜಿಗೌಡ, ಹೆಬ್ಬಾಳು ರಾಜಶೇಖರ್, ಎಂ.ಎಸ್.ಅನಂತು, ಪುರಸಭಾ ಸದಸ್ಯ ಕೆ.ಜಿ.ಸುಬ್ರಮಣ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net