ಕನಕದಾಸರ ಜಯಂತಿ ಆಚರಣೆ ಪೂರ್ವಭಾವಿ ಸಭೆ ಸೆ. 5ರಂದು

Published on

ಹಾವೇರಿ: ದಾಸ ಶ್ರೇಷ್ಠ ಕನಕದಾಸರ 536 ರಾಜ್ಯಮಟ್ಟದ ಜಯಂತ್ಯೋತ್ಸವ ಹಾಗೂ ಅ. 3ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಬೃಹತ್ ಸಮಾವೇಶ ನಿಮಿತ್ತ ಸೆ. 5ರಂದು ಮಧ್ಯಾಹ್ನ 3 ಗಂಟೆಗೆ ಕಾಗಿನೆಲೆಯ ಮಠದಲ್ಲಿ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಮಠದ ಧರ್ಮದರ್ಶಿ ಎಸ್‌ಎಫ್‌ಎನ್ ಗಾಜೀಗೌಡ್ರ ತಿಳಿಸಿದ್ದಾರೆ.
ಮಾಜಿ ಸಚಿವ ಎಚ್. ವಿಶ್ವನಾಥ, ಸಭೆಯ ಅಧ್ಯಕ್ಷರಾದ ಮಾಜಿ ಸಚಿವ ಎಚ್.ಎಂ. ರೇವಣ್ಣ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರು ಭಾಗವಹಿಸದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net