ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ದೊರತರಷ್ಟೇ ಸಾರ್ಥಕ

JEERALA GP
ಕನಕಗಿರಿ ತಾಲೂಕಿನ ಜೀರಾಳ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ ಕಟ್ಟಿಮನಿ, ಉಪಾಧ್ಯಕ್ಷೆ ಶರಣಮ್ಮ ಭಜಂತ್ರಿ ಅವರನ್ನು ಸನ್ಮಾನಿಸಲಾಯಿತು. ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣೇಗೌಡ ಮಾ.ಪಾ., ಪ್ರಮುಖರಾದ ರಾಮನಗೌಡ ಬುನ್ನಟ್ಟಿ, ಶಿವರೆಡ್ಡಿ ಇತರರಿದ್ದರು.
Published on

ಕನಕಗಿರಿ: ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಕೆಲಸವನ್ನು ಗ್ರಾಪಂ ಆಡಳಿತ ಮಂಡಳಿ ಮಾಡಬೇಕು ಎಂದು ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹೇಳಿದರು.

ತಾಲೂಕಿನ ಜೀರಾಳ ಗ್ರಾಪಂ 2ನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೀರಾಳ ಗ್ರಾಪಂ ನೂತನ ಹಾಗೂ ತಾಲೂಕಿನಲ್ಲಿ ಕಡಿಮೆ ಸದಸ್ಯರನ್ನು ಹೊಂದಿದ ಚಿಕ್ಕ ಗ್ರಾಮ ಪಂಚಾಯತಿಯಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಗ್ರಾಪಂ ಮಟ್ಟದಲ್ಲಾಗುವ ಮೂಲ ಸೌಲಭ್ಯಗಳನ್ನು ಒದಗಿಸಬೇಕೆಂದರು.

ಅಧಿಕಾರ ಸ್ವೀಕರಿಸಿದ ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ ಕಟ್ಟಿಮನಿ ಮಾತನಾಡಿ, ಜನರ ನಿರೀಕ್ಷೆಯಂತೆ ಕಾರ್ಯನಿರ್ವಹಿಸಲಿದ್ದು, ಸಾರ್ವಜನಿಕರು ಸಲಹೆಗಳನ್ನು ನೀಡುವುದರ ಜತೆಗೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ನೂತನ ಅಧ್ಯಕ್ಷೆ ಲಕ್ಷ್ಮಮ್ಮ ಕಟ್ಟಿಮನಿ, ಉಪಾಧ್ಯಕ್ಷೆ ಶರಣಮ್ಮ ಭಜಂತ್ರಿ ಅವರನ್ನು ಸನ್ಮಾನಿಸಲಾಯಿತು. ಗ್ರಾಪಂ ಸದಸ್ಯರಾದ ಲಕ್ಷ್ಮಮ್ಮ, ಹನುಮಮ್ಮ, ಪಾರ್ವತಮ್ಮ, ಲಕ್ಷ್ಮಮ್ಮ, ಶಾರದಾ, ವಿಜಯ್, ರಮೇಶ, ಬೆಟ್ಟಪ್ಪ, ಷಣ್ಮುಖಪ್ಪ, ಯಲ್ಲಪ್ಪ, ದುರುಗಪ್ಪ, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ, ಸದಸ್ಯ ಬಸವರಾಜ ಸ್ವಾಮಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶರಣೇಗೌಡ ಮಾ.ಪಾ., ಪ್ರಮುಖರಾದ ರಾಮನಗೌಡ ಬುನ್ನಟ್ಟಿ, ಶಿವರೆಡ್ಡಿ, ಸಿದ್ದಪ್ಪ ನಿರ್ಲೂಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net