ಮನೆಗಳ್ಳನಿಂದ 130 ಗ್ರಾಂ ಚಿನ್ನ ವಶ

CRIME
ಬಂಧಿತನಿಂದ ವಶಪಡಿಸಿಕೊಂಡಿರುವ ಆಭರಣಗಳು.
Published on

ಕನಕಗಿರಿ: ತಾಲೂಕಿನ ಮುಸಲಾಪುರದ ಮನೆಯೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿರುವ ಸ್ಥಳೀಯ ಪೊಲೀಸರು, ಆತನಿಂದ 9.10 ಲಕ್ಷ ರೂ. ಬೆಲೆಯ 130 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮುಸಲಾಪುರದ ವ್ಯಾಪಾರಿ ಮಾರುತಿ ಗೋಂದಳಿ ಕುಟುಂಬಸ್ಥರು ಜು.20ರಿಂದ 4 ದಿನಗಳ ಕಾಲ ಕೊಪ್ಪಳಕ್ಕೆ ತೆರಳಿದ್ದರು. ಇವರು ಮನೆಯಲ್ಲಿ ಇಲ್ಲದ್ದನ್ನು ಗಮನಿಸಿದ್ದ ಹುಲಿಹೈದರ ಗ್ರಾಮದ ರಾಜಾಸಾಬ್ ದರೋಸಿ ಮನೆಗೆ ನುಗ್ಗಿ 11.40 ಲಕ್ಷ ರೂ. ಬೆಲೆಯ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕದ್ದಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಗಂಭೀರತೆ ಪಡೆದುಕೊಂಡಿತ್ತು. ಇದರಿಂದ ಎಸ್‌ಪಿ ಡಾ.ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಎಸ್‌ಪಿ ಹೇಮಂತ್‌ಕುಮಾರ್ ಆರ್., ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ಮಾರ್ಗದರ್ಶನದಲ್ಲಿ ಪಿಐ ಎಂ.ಡಿ. ಫೈಜುಲ್ಲಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಈತ ವಿಚಾರಣೆ ವೇಳೆ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಕದಿದ್ದ ಆಭರಣ ಪೈಕಿ 130 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಬೇಧಿಸಿದ ತಂಡಕ್ಕೆ ಎಸ್‌ಪಿ ಬಹುಮಾನ ಘೋಷಿಸಿದ್ದಾರೆ. ಬಂಧಿತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net