ವ್ಯಾಸನಕೆರೆ ಪ್ರಭಂಜನಾಚಾರ್ಯರಿಗೆ ಕನಕಶ್ರೀ ಗರಿ; 18ರಂದು ಪ್ರದಾನ

Vidhanasoudha
Published on

ಬೆಂಗಳೂರು: ಶ್ರೀ ಸಂತ ಕನಕದಾಸ ಜಯಂತಿ ಪ್ರಯುಕ್ತ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಬಳ್ಳಾರಿಯ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಸೋಮವಾರ ನವೆಂಬರ್ 18ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ಮುಖ್ಯಮಂತ್ರಿಯವರು ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು.

ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

78 ವರ್ಷದ ಪ್ರಭಂಜನಾಚಾರ್ಯರು ಭಾರತೀಯ ಸಂಸ್ಕೃತಿ ಪರಂಪರೆ ಕುರಿತ ಪ್ರವಚನಗಳಿಗೆ ಹೆಸರುವಾಸಿಯಾದವರು. ವೇದ, ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಭಾಗವತದ ಮೇಲೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ, ಸಂಪಾದಿಸಿದ್ದಾರೆ. ಈ ಸಾಧನೆಗಾಗಿ ಅನೇಕ ಪ್ರಶಸ್ತಿ ಅವರ ಮುಡಿಗೇರಿದೆ. ವೃತ್ತಿಯಲ್ಲಿ ಅವರು ಬೆಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಸಂಸ್ಕೃತ ಪ್ರಾಧ್ಯಾಪಕರಾಗಿದ್ದರು. ಸ್ವಯಂ ನಿವೃತ್ತಿ ಪಡೆದು ಶ್ರೀ ಜಯತೀರ್ಥ ಹಸ್ತಪ್ರತಿ ಗ್ರಂಥಾಲಯವನ್ನು ಸ್ಥಾಪಿಸಿದರು. ಕನಕದಾಸರ ಸಮಗ್ರ ಕೀರ್ತನೆಗಳ ಕೃತಿಯನ್ನು ಹೊರತಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net