ಕಂಚಿಕಾರ ಕೆರೆ ಒತ್ತುವರಿ

Loka
Published on

ಕಡಬ: ಕಡಬ ಪಟ್ಟಣ ಪಂಚಾಯಿತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸವಣೂರು ಕಂಚಿಕಾರ ಕೆರೆ ಒತ್ತುವರಿ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದರು. ಪ್ರಕರಣ ಕೋರ್ಟ್‌ನಲ್ಲಿ ಇದ್ದರೂ ಕೆರೆ ಒತ್ತುವರಿ ಮಾಡಿಕೊಂಡಿರುವ ಪ್ರಭಾವಿಗಳು ಕೃಷಿ ಚಟುವಟಿಕೆ ಮಾಡುತ್ತಿರುವ ಬಗ್ಗೆ ತಿಳಿಸಿದಾಗ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್‌ಗೆ ಲೋಕಾಯುಕ್ತ ಪೊಲೀಸರು ಸೂಚನೆ ನೀಡಿದರು.

ಲೋಕಾಯುಕ್ತ ಡಿವೈಎಸ್ಪಿ ಚೆಲುವರಾಜ್, ಇನ್‌ಸ್ಪೆಕ್ಟರ್ ಅಮಾನುಲ್ಲ, ಸಿಬ್ಬಂದಿ ಸುರೇಂದ್ರ, ಗಾಯತ್ರಿ, ಶರತ್, ಪಂಪಣ್ಣ, ಕಡಬ ತಹಸೀಲ್ದಾರ್ ಅನಂತಶಂಕರ್ ಬಿ., ತಾಪಂ ಇಒ ನವೀನ್ ಕುಮಾರ್ ಭಂಡಾರಿ, ಉಪತಹಸೀಲ್ದಾರ್ ಮನೋಹರ್ ಕೆ.ಟಿ., ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ, ಪಪಂ ಮುಖ್ಯಾಧಿಕಾರಿ ಪಕೀರ ಮೂಲ್ಯ, ತಾಪಂ ವ್ಯವಸ್ಥಾಪಕ ಆನಂದ ಗೌಡ, ಭೂಮಾಪಕ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net