ಕಂಗನಾ ನಟನೆಯ 'ಎಮರ್ಜೆನ್ಸಿ' ಸಿನಿಮಾದ ರಿಲೀಸ್​​​ ಡೇಟ್​​​ ಬದಲು

kan
Published on

ಬಾಲಿವುಡ್ ನಟ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾ ನವೆಂಬರ್ 24ರಂದು ರಿಲೀಸ್ ಆಗಲಿದೆ ಎಂದು ಚಿತ್ರ ತಂಡ ಹೇಳಿತ್ತು. ಕಾರಣಾಂತರಗಳಿಂದ ‘ಎಮರ್ಜೆನ್ಸಿ’ ಸಿನಿಮಾದ ರಿಲೀಸ್​​ ಡೇಟನ್ನ ಮುಂದೂಡಲಾಗಿದೆ.


ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ‘ನಾವು ಘೋಷಿಸಿದ ತಿಂಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿದ್ದು, 2024ರಲ್ಲಿ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.


ಎಮರ್ಜೆನ್ಸಿ ಸಿನಿಮಾ ತೆರೆಗೆ ಬರುತ್ತಿದ್ದಂತೆಯೇ ಲೆಜೆಂಡ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ತಯಾರಾಗಲಿರುವ, ಸಂದೀಪ್ ಸಿಂಗ್ ನಿರ್ಮಾಣದ ಹೊಸ ಸಿನಿಮಾದಲ್ಲಿ ಕಂಗನಾ ನಟಿಸಲಿದ್ದಾರಂತೆ.


ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕುರಿತಾದ ‘ಎಮರ್ಜೆನ್ಸಿ’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಈ ಸಿನಿಮಾಗಾಗಿ ತಮ್ಮೆಲ್ಲ ಆಸ್ತಿಯನ್ನು ಅಡ ಇಟ್ಟಿರುವುದಾಗಿ ಬರೆದುಕೊಂಡಿದ್ದಾರೆ.


ಈ ಸಿನಿಮಾ ಕಂಗನಾ ಬಾಲಿವುಡ್​​ ಜರ್ನಿಗೆ ಮತ್ತಷ್ಟು ಸಹಾಯಕವಾಗಲಿದ್ದು, ಕಂಗನಾ ಈ ಸಿನಿಮಾದಲ್ಲಿ ಕೇವಲ ನಟಿಯಾಗಿ ಮಾತ್ರವಲ್ಲ, ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿಯೂ ಅವರು ಕೆಲಸ ಮಾಡಿದ್ದಾರೆ.


ಎಮರ್ಜನ್ಸಿ ಸಿನಿಮಾದಲ್ಲಿ ನಟಿ ಕಂಗನಾ ನಟಿಯಾಗಿ, ನಿರ್ದೇಶಕಿಯಾಗಿ, ನಿರ್ಮಾಪಕಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದು, ಈ ಕಾರಣಕ್ಕಾಗಿ ತಮ್ಮ ಆಸ್ತಯನ್ನ ಅಡವಿಡುವಂತಹ ಪರಿಸ್ಥಿತಿ ಬಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ.


ಸಿನಿಮಾದಲ್ಲಿ ಕಂಗನಾ ಇಂದಿರಾ ಗಾಂಧಿ ಪಾತ್ರವನ್ನ ನಿರ್ವಹಿಸಲ;ಇದ್ದು, ಈಗಾಗಲೇ ಕೆಲ ಪೋಸ್ಟರ್​​ಗಳನ್ನೂ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net