ಕನ್ನಡ ಚಿತ್ರರಂಗದ ಹಿರಿಯ ನಟ ಟಿ. ತಿಮ್ಮಯ್ಯ ನಿಧನ; ಕಂಬನಿ ಮಿಡಿದ ಕಲಾವಿದರು

ವಿಜಯವಾಣಿ - 2024-11-16T193452.412
Published on

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಟಿ. ತಿಮ್ಮಯ್ಯ (92) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ನಟನ ಅಗಲಿಕೆಗೆ ಕನ್ನಡ ಚಿತ್ರರಂಗದ ಗಣ್ಯರು, ಕಲಾವಿದರು ಕಂಬನಿ ಮಿಡಿದಿದ್ದಾರೆ.

ತಮ್ಮ ನಾಲ್ಬರು ಮಕ್ಕಳನ್ನು ಅಗಲಿರುವ ತಿಮ್ಮಯ್ಯನವರು ಮೇರು ನಟರಾದಂತ ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅನಂತ್ ನಾಗ್. ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಮತ್ತು ಅನೇಕರೊಂದಿಗೆ ಕೆಲಸ ಮಾಡಿದ್ದಾರೆ.

ಚೆಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ, ಈ ಜೀವ ನಿನಗಾಗಿ, ಕುರುಕ್ಷೇತ್ರ, ನಿಶ್ರ್ಕರ್ಷ, ಬೆಳದಿಂಗಳ ಬಾಲೆ ಸೇರಿದಂತೆ ಮುಂತಾದ ಚಿತ್ರಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಳೆ (ನ.17) ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net