ರಾಜ್ಯೋತ್ಸವ ಪ್ರಶಸ್ತಿಗೆ ನಾಮನಿರ್ದೇಶನ

K and C
Published on

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಂದ ಸಾಧಕರ ಹೆಸರು ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರಗಳ ಸಾಧನೆ ಮಾಡಿರುವ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದೆ. ನಾಮನಿರ್ದೇಶನಕ್ಕೆ ಅ. 1ರಿಂದ 15ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್ ವಿಳಾಸ: https://sevasindhu.karnataka.gov.in ಮೂಲಕ ನಾಮನಿರ್ದೇಶನ ಮಾಡಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net