ನಾಳೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

likhita
ಜಿ.ಲಿಖಿತಾ
Published on

ಭದ್ರಾವತಿ: ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಜ.9ರಂದು ನ್ಯೂಟೌನ್ ಎಸ್‌ಎವಿ ಶಾಲೆ ಆವರಣದಲ್ಲಿ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್.ಸುಧಾಮಣಿ ಹೇಳಿದರು.

ಸಮ್ಮೇಳನಾಧ್ಯಕ್ಷೆಯಾಗಿ ಪೂರ್ಣಪ್ರಜ್ಞ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ.ಲಿಖಿತಾ ಆಯ್ಕೆಯಾಗಿದ್ದಾರೆ. ಅಂದು ಬೆಳಗ್ಗೆ 9.30ಕ್ಕೆ ಧ್ವಜಾರೋಹಣ ನೆರವೇರಲಿದೆ. ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ.ಜಗದೀಶ್ ರಾಷ್ಟ್ರಧ್ವಜ, ಪಿಎಸ್‌ಐ ಕವಿತಾ ನಾಡಧ್ವಜ ಹಾಗೂ ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸುವರು. 10 ಗಂಟೆಗೆ ಆದಿಚುಂಚನಗಿರಿ 8ನೇ ತರಗತಿ ವಿದ್ಯಾರ್ಥಿ ಮನೀಷ್ ಪಿ. ಯಾದವ್ ಸಮ್ಮೇಳನವನ್ನು ಉದ್ಘಾಟಿಸುವರು. ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶಿವಮೊಗ್ಗ ಶಾಖಾ ಮಠದ ಶ್ರೀ ಸಾಯಿನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಕ್ಕಳಿಗಾಗಿ ಕವಿಗೋಷ್ಠಿ, ಕಥಾಗೋಷ್ಠಿ, ಪ್ರಚಲಿತ ವಿದ್ಯಾಮಾನಗಳು ಕುರಿತು 3 ಗೋಷ್ಠಿಗಳನ್ನು ಆಯೋಜಿಸಲಾಗಿದೆ. ತಾಲೂಕಿನ ವಿವಿಧ ಶಾಲಾ ಮಕ್ಕಳು ಸಮ್ಮೇಳನದಲ್ಲಿ ಭಾಗವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಕೆ.ಸಂಗಮೇಶ್ವರ್, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಬಿಇಒ ಎ.ಕೆ.ನಾಗೇಂದ್ರಪ್ಪ, ಪ್ರಾಚಾರ್ಯೆ ಎಸ್‌ಎವಿ ಕಾಲೇಜು ಹರಿಣಾಕ್ಷಿ, ಕಸಾಪ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ ಮತ್ತಿತರರು ಭಾಗವಹಿಸುವರು. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಕೋಡ್ಲುಯಜ್ಞಯ್ಯ, ಪದಾಧಿಕಾರಿಗಳಾದ ಜೆ.ಉಮಾಪತಿ, ಗಂಗರಾಜ್, ಬಿ.ಕಾಂತಪ್ಪ, ಕಮಲಕುಮಾರಿ, ಬಿ.ಎಚ್.ಪ್ರಕಾಶ್, ಮಲ್ಲಿಕಾಂಬಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net