ಸಂಗೀತ ನಿರ್ದೇಶಕ ಗುರುಕಿರಣ್​ ಅತ್ತೆ ಮನೆಯಲ್ಲಿ 2.5 ಲಕ್ಷ ರೂ. ಕಳ್ಳತನ

guru kiran
Published on

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆ ನಿವಾಸದಲ್ಲಿ ಕಳ್ಳತನವಾಗಿದೆ ಎಂದು ವರದಿಯಾಗಿರುವ  ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31ರಂದು ಮಧ್ಯಾಹ್ನ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂಪಾಯಿಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಗುರುಕಿರಣ್ ಅತ್ತೆ ಮನೆ ಬೆಂಗಳೂರಿನ ಚಂದ್ರಲೇಔಟ್​ನಲ್ಲಿದೆ.

ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯಲ್ಲಿ ಹುಡುಕಾಡಿದ್ದಾರೆ. ಮನೆಯೊಳಗೆ ಯಾರು ಬಂದಿಲ್ಲ ಹೇಗೆ ಕಳ್ಳತನವಾಯ್ತು ಎಂದು ತಲೆಕೆಡಿಸಿಕೊಂಡಿದ್ದಾರೆ.

ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. 6 ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಮನೆ ಕೆಲಸದಾಕೆ ರತ್ಮಮ್ಮ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಮನೆ ಕೆಲಸದಾಕೆಯನ್ನು ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net