ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಮೊದಲ ಸಭೆ

Published on

ಬೆಂಗಳೂರು:
ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಸಮಿತಿಯ ಮೊದಲ ಸಭೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಶೋತ್ತಮ ಬಿಳಿಮಲೆ, ಸಂಗೀತ ನಿರ್ದೇಶಕ ಹಂಸಲೇಖ ಮತ್ತಿತರರು ಹಾಜರಿದ್ದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪಾರದರ್ಶಕತೆ ಇರಲಿ ಎನ್ನುವ ಕಾರಣಕ್ಕಾಗಿ ಈ ಸಮಿತಿ ರಚನೆ ಮಾಡಲಾಗಿದೆ. ಆಯಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಮತ್ತು ಹಿರಿಯ ಪ್ರತಿಭಾನ್ವಿತರನ್ನು ಆಯ್ಕೆ ಮಾಡಲು ತಾವೆಲ್ಲರೂ ಮುತುವರ್ಜಿಯಿಂದ ಕೆಲಸ ಮಾಡಬೇಕು ಎಂದು ಸಚಿವ ತಂಗಡಗಿ ಅವರು ಸಲಹೆ ನೀಡಿದರು.
ಅಂತಿಮ ಪಟ್ಟಿಯ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲ ಸಭೆ ನಡೆಸಲಾಗುತ್ತದೆ. ಅದಕ್ಕಿಂತ ಮೊದಲು ಎಲ್ಲಾ ವಿಭಾಗಗಳಲ್ಲೂ ಸಮರ್ಪಕವಾದ ಆಯ್ಕೆ ಆಗಬೇಕು ಎಂದು ಸಚಿವರು ತಿಳಿಸಿದರು.
ಸದಸ್ಯರುಗಳು ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಉತ್ತಮ ಆಯ್ಕೆ ಮಾಡಲು ಸಂಘಟಿತ ಪ್ರಯತ್ನ ಮಾಡೋಣ ಎಂದರು.
ಸಭೆಯಲ್ಲಿ ಅಕಾಡೆಮಿಯ ಅಧ್ಯಕ್ಷರು, ಆಯ್ಕೆ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net