ಡಿ.1ಕ್ಕೆ ರಾಜ್ಯೋತ್ಸವ ಪುರಸ್ಕೃತ ಪತ್ರಕರ್ತರಿಗೆ ಅಭಿನಂದನೆ

kuwj invit
Published on

ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂೃಜೆ)ದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಡಿ.1ರಂದು ಬೆಳಿಗ್ಗೆ 11.15ಕ್ಕೆ ಕಂದಾಯ ಭವನದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.


ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದಿನೇಶ್ ಅಮೀನ್ ಮಟ್ಟು, ಮಾಯಾ ಶರ್ಮ, ರಫೀಕ್ ಭಂಡಾರಿ, ಸುಬ್ಬು ಹೊಲೆಯಾರ್, ಪತ್ರಿಕಾ ವಿತರಕರಾದ ಜವರಪ್ಪ ಅವರನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿನಂದಿಸುವರು.


ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಭಾಗವಹಿಸಲಿದ್ದು, ಕೆಯುಡಬ್ಲೂೃಜೆ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net