ವಿಮಾನ ನಿಲ್ದಾಣದ ಉದ್ಘಾಟನೆಗೆ ಕನ್ನಡದಲ್ಲೇ ಟ್ವೀಟ್ ಮಾಡಿದ ಕೇಂದ್ರ ಸಚಿವ

23 smg 19
Published on

ಶಿವಮೊಗ್ಗ: ವಿಮಾನ ನಿಲ್ದಾಣದ ಉದ್ಘಾಟನೆ ಕುರಿತು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭಾಶಯ ಕೋರಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಯೋಗಿಕ ವಿಮಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆದ ವಿಡಿಯೋವನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಟ್ವೀಟ್ ಮಾಡಿದ್ದರು. ಅದಕ್ಕೆ ಕೇಂದ್ರ ಸಚಿವರು ಕನ್ನಡದಲ್ಲಿಯೇ ಪ್ರತಿಕ್ರಿಯಿಸಿದ್ದು ಕರ್ನಾಟಕದ ಜನರೇ, ನಿಮ್ಮ ಭೂಮಿಗೆ 148ನೇ ವಿಮಾನ ನಿಲ್ದಾಣ ದೊರೆಯುತ್ತಿದ್ದು, ಬನ್ನಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹಾರೈಸಿದ್ದಾರೆ.

ಫೆ.21ರಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಭಾರತೀಯ ವಾಯುಪಡೆ ಬೋಯಿಂಗ್ 737 ವಿಮಾನ ಪ್ರಾಯೋಗಿಕ ಹಾರಾಟ ನಡೆಸಿ ಯಶಸ್ವಿಯಾಗಿತ್ತು. ಫೆ.27 ರಂದು ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ ಮಾಡಲಿದ್ದು ಪ್ರಾಯೋಗಿಕ ವಿಮಾನ ಹಾರಾಟ ಯಶಸ್ವಿಯಾಗಿದೆ ಎಂದು ಟ್ವೀಟ್ ಮಾಡಿದ್ದರು. ಎರಡು ದಿನದ ಹಿಂದಿನ ಟ್ವೀಟ್‌ಗೆ ಕೇಂದ್ರ ಸಚಿವರು ಕನ್ನಡದಲ್ಲಿ ಪ್ರತಿಕ್ರಿಯಿಸಿದ್ದು 82 ಸಾವಿರಕ್ಕೂ ಅಧಿಕ ಜನರು ವೀಕ್ಷಣೆ ಮಾಡಿದ್ದು, 140ಕ್ಕೂ ಹೆಚ್ಚು ಜನ ರೀಟ್ವೀಟ್ ಮಾಡಿದ್ದಾರೆ. ಸಾವಿರಕ್ಕೂ ಅಧಿಕ ಜನ ಲೈಕ್ ಮಾಡಿದ್ದಾರೆ. ಸಚಿವರ ಟ್ವೀಟ್‌ಗೆ ಬಿ.ವೈ.ರಾಘವೇಂದ್ರ ಅವರು ರಾಜ್ಯದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆಂದು ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net