ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ

Published on

ಬೆಂಗಳೂರು:
ಮಾಗಡಿ ರಸ್ತೆ ಟೋಲ್‌ಗೇಟ್ ಬಳಿ ವಿದ್ಯಾರಣ್ಯನಗರದಲ್ಲಿರುವ ಶ್ರೀ ಮಂಜುನಾಥ ವಿದ್ಯಾಲಯದಲ್ಲಿ
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಕಲ್ಪಿಸಲಾಗಿದೆ.
2024-25 ನೇ ಸಾಲಿಗೆ ಕನ್ನಡ ಮಾಧ್ಯಮಕ್ಕೆ ಹೊಸದಾಗಿ ಸೇರುವ 5ನೇ ತರಗತಿ ವಿದ್ಯಾರ್ಥಿಗಳಿಗೆ ದಾಖಲಾತಿ ಮಾಡಿದ ಕೂಡಲೇ ರೂ. 10,000/- ಪ್ರೋತ್ಸಾಹ ಧನವಾಗಿ ನೀಡಲಾಗುತ್ತದೆ. (ದಾಖಲಾತಿ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ 5 ವರ್ಷ ಅಂದರೆ 6.7, 8, 9, 10ನೇ ತರಗತಿಯವರಿಗೆ ಇದೇ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಲೇಬೇಕು)
ಸಂಸ್ಥೆಯ ಅಧ್ಯಕ್ಷರು ಮತ್ತು ಪ್ರಾಂಶುಪಾಲರು ಆದ ನಾಗರಾಜು ರವರ ಮುಖಂಡತ್ವದಲ್ಲಿ ನಡೆಯುತ್ತಿರುವ ಈ ಸಂಸ್ಥೆ ಸುಮಾರು 56 ವರ್ಷಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಹತ್ತನೆಯ ತರಗತಿಯವರೆಗೆ (ಔಓಎ-10ಠಿ ಖಠಿ) ಸುಮಾರು 1200 ಕ್ಕೂ ಹೆಚ್ಚು ಬಡಮಕ್ಕಳು ಮತ್ತು ಆರ್ಥಿಕವಾಗಿ ಹಿಂದುಳಿದ ಕನ್ನಡ ಮಾಧ್ಯಮ ಮಕ್ಕಳಿಗೆ ಶುಲ್ಕವಿಲ್ಲದೆ ಉಚಿತ ಶಿಕ್ಷಣ ಮತ್ತು ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಕಡಿಮೆ ಶುಲ್ಕದಲ್ಲಿ ನುರಿತ ಹಾಗೂ ಉತ್ತಮ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಬೃಹತ್ ಶಿಕ್ಷಣ ಸಂಸ್ಥೆಯಾಗಿ ಬೆಳೆದು ನಿಂತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net