ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​ ಆಯ್ಕೆ

KGovindaraj
Published on

ಕೌಲಾಲಂಪುರ್: ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಏಷ್ಯಾ ಘಟಕದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ಹಿಂದೆ ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ(BFI) ಅಧ್ಯಕ್ಷರಾಗಿದ್ದ ಕೆ. ಗೋವಿಂದರಾಜ್ ಅವರು ಇದೀಗ (FIBA) ಅಂತರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಏಷ್ಯಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡಿಗರಾಗಿದ್ದಾರೆ.

ಇಂದು ಬೆಳಗ್ಗೆ ಮಲೇಷಿಯಾದ ಕೌಲಾಲಂಪುರದಲ್ಲಿ ನಡೆದ ಫಿಬಾ 2023 ಏಷ್ಯಾ ಸಾಮಾನ್ಯ ಸಭೆಯಲ್ಲಿ ಗೋವಿಂದರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು 2023 ರಿಂದ 2027ರವರೆಗೆ ಅಧಿಕಾರದಲ್ಲಿರಲಿದ್ದಾರೆ.

ಫಿಬಾ ಅಧಿಕಾರ ಹಂಚಿಕೆ ನೀತಿಯ ಪ್ರಕಾರ ಮುಂದಿನ ಅಧ್ಯಕ್ಷರು ಸೌತ್ ಏಷ್ಯನ್ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ವಲಯದವರೇ ಆಗಬೇಕಿತ್ತು. ಹೀಗಾಗಿ ಗೋವಿಂದರಾಜ್ ಅವರಿಗೆ ಅವಕಾಶ ಒದಗಿಬಂದಿದೆ. ಅಂತರರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​​ ಅವರು ನೇಮಕಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net