ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ: ಸಿಎಂ ಕಾರ್ಯಾಲಯ | Nepal Violence

Untitled design - 2025-09-10T130125.781
Published on

Nepal Violence: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಹೇಳಿದ್ದಾರೆ.

ನೇಪಾಳದಲ್ಲಿ ಹಿಂಸಾಚಾರ

ನೆರೆಯ ರಾಷ್ಟ್ರ ನೇಪಾಳದಲ್ಲಿ ಸರ್ಕಾರ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡಿದ ಪರಿಣಾಮದ ಹಿನ್ನೆಲೆ ಶುರುವಾಗ ಜನರಲ್ -ಝೆಡ್ ಪ್ರತಿಭಟನೆ ಹಿಂಸಾಚಾರದ ಸ್ವರೂಪ ಪಡೆದಿದೆ. ಭಾರೀ ಪ್ರತಿಭಟನೆಯಲ್ಲಿ 20 ಜನರು ಬಲಿಯಾಗಿದ್ದು, ಪ್ರಧಾನಿ ಪ್ರಸಾದ್​ ಶರ್ಮಾ ಓಲಿ ರಾಜೀನಾಮೆ ನೀಡಿ ಪಾಲಾಯನಗೈದಿದ್ದಾರೆ. ಇದರ ನಡುವೆ ಇದೀಗ ಪ್ರತಿಭಟನೆಕಾರರು ಪಾರ್ಲಿಮೆಂಟ್​ ಕಟ್ಟಕ್ಕೆ ನುಗ್ಗಿ ಬೆಂಕಿ ಹಾಕಿದ್ದಾರೆ.

ಈ ಹಿಂಸಾಚಾರ ಹಿನ್ನೆಲೆ ಕನ್ನಡಿಗರು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net