'ಕಾಂತಾರ' ಚಿತ್ರತಂಡಕ್ಕೆ ಎಚ್ಚರಿಕೆ ನೀಡಿದ ಹೊಸೂರು ಗ್ರಾಮಸ್ಥರು! ಅರಣ್ಯ ನಾಶ ಮಾಡ್ತಾ kantara-2 ಚಿತ್ರತಂಡ..

kantara
Published on

ಬೆಂಗಳೂರು: (kantara-2) ಕಾಂತಾರ-2 ಚಿತ್ರೀಕರಣದ ನೆಪದಲ್ಲಿ ಚಿತ್ರತಂಡ ಅರಣ್ಯಕ್ಕೆ ಹಾನಿಯುಂಟು ಮಾಡಿದ ಎಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಪ ಕೇಳಿ ಬಂದಿದೆ.

ಕಾಂತಾರ-2 ಸಿನಿಮಾದ ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕಾಗಿ ಪರವಾನಿಗೆ ಪಡೆದುಕೊಂಡಿದೆ. ಮರಗಳನ್ನು ಕಡಿದು, ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಿರುವುದಾಗಿ ಕಾಂತಾರ  ಚಿತ್ರತಂಡ ವಿರುದ್ಧ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅರಣ್ಯದೊಳಗೆ ಬೆಂಕಿ ಹಾಕುತ್ತಿರುವುದರಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು. ಸಿನಿಮಾ ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬುವುದರ ಬಗ್ಗೆ ಅರಣ್ಯ ಹಾಗೂ ಕಂದಾಯ ಇಲಾಖೆ ಬಹಿರಂಗಪಡಿಸಬೇಕು. ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಿ ಪರಿಸರ ಉಳಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಅರಣ್ಯಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ ಎನ್ನುವ ಆರೋಪವನ್ನು ಕಾಂತಾರ ತಂಡದ ಮೇಲೆ ಮಾಡಲಾಗಿದೆ. 7 ಭಾಷೆಗಳಲ್ಲಿ ಈ ಸಲ ಚಿತ್ರ ತೆರೆಗೆ ಬರಲಿದ್ದು ಈ ವರ್ಷದ ಅಕ್ಟೋಬರ್ 2ರಂದು ಚಿತ್ರ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಕೋಟಿ ಕೋಟಿ ಹಣವನ್ನು ನೀರಿನಂತೆ ಖರ್ಚು ಮಾಡಲಾಗುತ್ತಿದೆ. ಆದರೆ ಇದೀಗ ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗುತ್ತಿದೆ ಎನ್ನುವ ಹೊಸ ಆರೋಪ ಕೇಳಿ ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net