ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 52,505 ವಿದ್ಯಾರ್ಥಿಗಳು ಪಾಸ್​

PU Exam
Published on

ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು (ಮೇ 21) ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಪ್ರಕಟಿಸಿದ್ದು, ಫಲಿತಾಂಶವನ್ನು ಮಂಡಳಿಯ ವೆಬ್‌ಸೈಟ್ http//karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.

ಏಪ್ರಿಲ್ 29ರಿಂದ ಮೇ 16ರವರೆಗೆ ಪರೀಕ್ಷೆ ನಡೆಸಲಾಗಿತ್ತು. 1,49,824 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 1,48,942 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 52,505 ವಿದ್ಯಾರ್ಥಿಗಳು ಪಾಸ್​ ಆಗಿದ್ದು, ಶೇ. 35 ರಷ್ಟು ಫಲಿತಾಂಶ ಬಂದಿದೆ.

ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ - 1 ಮತ್ತು ಪರೀಕ್ಷೆ - 2 ರಲ್ಲಿ ವಿಷಯವಾರು ಗಳಿಸಿದ ಅತಿಹೆಚ್ಚು ಅಂಕಗಳನ್ನು ಪರಿಗಣಿಸಿ ಅಂತಿಮ ಫಲಿತಾಂಶವನ್ನು https://kseah.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.

ಉತ್ತರ ಪತ್ರಿಕೆಯ ಸ್ಕ್ಯಾನ್​ ಪ್ರತಿ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರುಎಣಿಕೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು:

PUC Result 1

ಉತ್ತರ ಪತ್ರಿಕೆಯ ಮರುಮೌಲ್ಯಮಾಪನ:

* ಯಾವುದೇ ಅಭ್ಯರ್ಥಿಗಳು ಪರೀಕ್ಷೆ -3 ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.

* ಯಾವುದೇ ಸಂದರ್ಭದಲ್ಲಿ, "ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್ ಎಲ್ ಪಿ ಇ 1997, 29 (ಎ)" ಪ್ರಕಾರ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರುಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-2ರ ಅಂಕಗಳೆಂದು ಪರಿಗಣಿಸಲಾಗುವುದು.

* ಮರುಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.

* ಮರು ಮೌಲ್ಯಮಾಪನದ ಮತ್ತು ಮರುಎಣಿಕೆಯ ಫಲಿತಾಂಶವನ್ನು ಮಂಡಳಿಯ https://kseeb.karnataka.gov.in ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ಅಂಕಗಳ ಮರುಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.

PUC Result 3
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net