ರಾಜ್ಯದಲ್ಲಿ 5 ಲಕ್ಷ ದಾಟಿದ ಸಕ್ರಿಯ ಪ್ರಕರಣಗಳ ಸಂಖ್ಯೆ! ಇಂದು ಒಂದೇ ದಿನ 49 ಸಾವಿರ ಪ್ರಕರಣ ಪತ್ತೆ

corona
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಭಾರೀ ಏರಿಕೆ ಕಂಡುಬರುತ್ತಿದ್ದು, ಇಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 49,058 ಜನರಲ್ಲಿ ಸೋಂಕು ದೃಢವಾಗಿದ್ದರೆ 328 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಎಂದಿನಂತೆ ಇಂದೂ ಕೂಡ ಬೆಂಗಳೂರಿನಲ್ಲಿ ಅತಿ ಹೆಚ್ಚು, 23,706 ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ 139 ಗುರುವಾರ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಇದೊಂದೇ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7,145ಕ್ಕೆ ಏರಿದ್ದರೆ ಒಟ್ಟು ಪ್ರಕರಣಗಳ ಸಂಖ್ಯೆ 8,87,086ಕ್ಕೆ ಹೆಚ್ಚಳವಾಗಿದೆ. ಅದರಲ್ಲಿ 5,47,208 ಸೋಂಕಿತರು ಗುಣಮುಖವಾಗಿದ್ದು, 3,32,732 ಸಕ್ರಿಯ ಪ್ರಕರಣಗಳು ಬಾಕಿಯಿವೆ.

ರಾಜ್ಯದಲ್ಲಿ ಈವರೆಗೆ ಪತ್ತೆಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 12,55,797 ಮಂದಿ ಗುಣಮುಖವಾಗಿದ್ದರೆ 5,17,075 ಸಕ್ರಿಯ ಪ್ರಕರಣ ಬಾಕಿಯಿದೆ. ಈವರೆಗೆ ಒಟ್ಟು 17,212 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net